fbpx
ಸಮಾಚಾರ

ಬಿಡುಗಡೆಯಾಯ್ತು ‘ಮುನಿರತ್ನ ಕುರುಕ್ಷೇತ್ರ’ ಚಿತ್ರದ ಎರಡನೇ ಹಾಡು.

ಬಹುನಿರೀಕ್ಷಿತ ‘ಕುರುಕ್ಷೇತ್ರ’ ಚಿತ್ರದ ಎರಡನೇ ಹಾಡು ‘ಚಾರುತಂತಿ’ ಬಿಡುಗಡೆಯಾಗಿದೆ. ದಚ್ಚು ಹಾಗೂ ಮೇಘನಾರವರ ಕೆಲವೊಂದಿಷ್ಟು ಸ್ಟಿಲ್ಸ್ ಗಳನ್ನು ಈ ಹಾಡಿನಲ್ಲಿ ನೋಡಬಹುದಾಗಿದೆ. ಸೋನು ನಿಗಮ್ ಹಾಗೂ ಶ್ರೇಯಾ ಘೋಷಾಲ್ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡು ಟ್ರೆಂಡ್ ಕ್ರಿಯೇಟ್ ಮಾಡುತ್ತಿದೆ.

 

 

ಮುನಿರತ್ನ ಕುರುಕ್ಷೇತ್ರವನ್ನು ವಿಶ್ವದಾದ್ಯಂತ 5 ಭಾಷೆಗಳಲ್ಲಿ ಬಿಡುಗಡೆ ಂಆಡಲು ರಾಕ್‌ಲೈನ್ ವೆಂಕಟೇಶ್ ಸಿದ್ದವಾಗ್ಗಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50 ನೇ ಚಿತ್ರ ಇದಾಗಿದ್ದು ಕನ್ನಡದಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ಏಕಕಾಲದಲ್ಲಿಡಿ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಬಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತದೆ.

ಭಾರೀ ಬಜೆಟ್‌ನ ಕುರುಕ್ಷೇತ್ರದ ಬಗ್ಗೆ ಈಗಾಗಲೇ ದೊಡ್ಡ ಮಟ್ಟದ ನಿರೀಕ್ಷೆಗಳು ಹುಟ್ಟಿಕೊಂಡಿವೆ. ಕರ್ನಾಟಕ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿಯೂ ಕನ್ನಡದ ಕುರುಕ್ಷೇತ್ರ ಸದ್ದು ಮಾಡುತ್ತಿದೆ. ಕುರುಕ್ಕ್ಷೇತ್ರ ಚಿತ್ರಕ್ಕೆ ಭಾರತೀಯ ಮಹಾಕಾವ್ಯ ಮಹಾಭಾರತವನ್ನು ಆಧರಿಸಿ ಜೆ.ಕೆ. ಭಾರವಿಯವರು ಬರೆದಿದ್ದಾರೆ..ಸಿನಿಮಾವನ್ನು ನಾಗಣ್ಣ ನಿರ್ದೇಶಿಸುತ್ತಿದ್ದು ವಿ.ಹರಿಕೃಷ್ಣ ಚಿತ್ರಕ್ಕೆ ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top