fbpx
ಸಮಾಚಾರ

ಕರ್ನಾಟಕದ ನಂತರ ಪಂಜಾಬ್ ನಲ್ಲೂ ಕಾಂಗ್ರೆಸ್ ಬಂಡಾಯ – ಸಚಿವ ಸ್ಥಾನಕ್ಕೆ ಸಿಧು ರಾಜೀನಾಮೆ.

ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸಲ್ಲಿಸಿದ ಸಿಧು ಅದರ ಪ್ರತಿಯನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪತ್ರವು 2019 ರ ಜೂನ್ 10ನೇ ದಿನಾಂಕವನ್ನೊಳಗೊಂಡಿದೆ.

 

 

ಅಮಿಂದರ್​ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಕಳೆದ ತಿಂಗಳು ಸಂಪುಟ ಪುನಾರಚನೆ ಮಾಡಿತ್ತು. ಈ ಸಂದರ್ಭದಲ್ಲಿ ನವಜೋತ್​ ಸಿಂಗ್​ ಸಿಧು ಅವರಗೆ ಖಾತೆಯನ್ನು ಬದಲಾಯಿಸಲಾಗಿತ್ತು. ಸ್ಥಳೀಯ ಸಂಸ್ಥೆಗಳ ಖಾತೆಯಿಂದ ಇಂಧನ ಮತ್ತು ನವೀಕರಿಸಬಹುದಾದ ಶಕ್ತಿ ಇಲಾಖೆಗೆ ಸಚಿವರನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಇದರಿಂದ ಬೇಸರಗೊಂಡಿದ್ದ ಈವರೆಗೆ ಅಧಿಕಾರ ವಹಿಸಿಕೊಂಡಿರಲಿಲ್ಲ. ಅಲ್ಲದೆ, ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮತ್ತು ರಾಜ್ಯದ ಪಕ್ಷದ ನಾಯಕತ್ವದ ವಿರುದ್ಧ ಟೀಕೆ ಮಾಡಿದ್ದ ಸಿಧು ಅವರಿಂದ ಕಾಂಗ್ರೆಸ್ ಪಕ್ಷದ ಭವಿಷ್ಯವನ್ನು ಹಾಳಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ನಂತರ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಮೇಥಿಯಿಂದ ಲೋಕಸಭಾ ಚುನಾವಣೆಯಲ್ಲಿ ಸೋತರೆ ರಾಜಕೀಯ ತೊರೆಯುವುದಾಗಿ ಈ ಹಿಂದೆ ಪ್ರತಿಜ್ಞೆಯನ್ನು ಕೂಡ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top