fbpx
ಸಮಾಚಾರ

ನಿಧಿಗಾಗಿ ಕಿಡಿಗೇಡಿಗಳಿಂದ ಇತಿಹಾಸ ಪ್ರಸಿದ್ಧ ಬೃಂದಾವನ ಧ್ವಂಸ- ವ್ಯಾಪಕ ಖಂಡನೆ.

ಕೆಲ ಕಿಡಿಗೇಡಿಗಳು ನಿಧಿಗಾಗಿ ಐತಿಹಾಸಿಕ ಪ್ರಸಿದ್ಧ ನವಬೃಂದಾವನವನ್ನು ಧ್ವಂಸಗೊಳಿಸಿದ ಘಟನೆ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ನಡೆದಿದೆ.

 

 

 

ಆನೆಗುಂದಿ ಸಮೀಪವಿರುವ ನವಬೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ ಸಮಾಧಿಗಳು ಇವೆ. ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಬುಧವಾರ ರಾತ್ರಿ ನವಬೃಂದಾವನವನ್ನು ಅಗೆದು ಹಾಕಿದ್ದಾರೆ. ವೃಂದಾವನದ ಕೆಳಭಾಗ ಸಂಪೂರ್ಣ ಅಗೆಯಲಾಗಿದೆ. ದುಷ್ಕರ್ಮಿಗಳು ನಿಧಿಯಾಸೆಗೆ ವೃಂದಾವನ ಆಗೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ನವಬೃಂದಾವನದಲ್ಲಿ ಪ್ರತಿವರ್ಷ ರಾಘವೇಂದ್ರ ಮಠದವರಿಂದ ಮತ್ತು ಉತ್ತಾರಾಧಿ ಮಠದಿಂದ ಅದ್ಧೂರಿಯಾಗಿ ಆರಾಧನೆ ಕಾರ್ಯಕ್ರಮ ಜರಗುತ್ತದೆ. ನವಬೃಂದಾವನ ಮಾಲೀಕತ್ವಕ್ಕಾಗಿ ಈ ಎರಡು ಮಠದವರು ಸುಪ್ರೀಂಕೊರ್ಟ್ ಮೆಟ್ಟಿಲೇರಿದ್ದು, ಯಾರ ಪರವೂ ತೀರ್ಪು ಬಂದಿಲ್ಲ.

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top