fbpx
ಸಮಾಚಾರ

ಪ್ರಧಾನಿ ನರೇಂದ್ರ ಮೋದಿಗೆ ಯುಎಇ ಅತ್ಯುನ್ನತ ನಾಗರಿಕ ಪುರಸ್ಕಾರ

ಪ್ರಧಾನಿ ನರೇಂದ್ರ ಮೋದಿಯವರಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ಜಯೀದ್’ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೋದಿಯವರ ಶ್ಲಾಘನೀಯ ಪ್ರಯತ್ನವನ್ನು ಮೆಚ್ಚಿ ಶನಿವಾರ ಈ ಅತ್ಯುನ್ನತ ಗೌರವ ನೀಡಿ ಸನ್ಮಾನಿಸಲಾಗಿದೆ.

ಉಭಯ ದೇಶಗಳ ನಡುವೆ ಉತ್ತಮ ಸಂಬಂಧ ಕಲ್ಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ನರೇಂದ್ರ ಮೋದಿ ಅವರಿಗೆ ಝಾಯೆದ್ ಮೆಡಲ್ ನೀಡಿ ಗೌರವ ಸಲ್ಲಿಸಲಾಗುತ್ತಿದೆ ಎಂದು ಯುಎಇ ಸರ್ಕಾರ ತಿಳಿಸಿದೆ.

2015ರಲ್ಲಿ ಮೋದಿ ಅವರು ಯುಎಇಗೆ ಭೇಟಿ ನೀಡಿದ ಬಳಿಕ ಎರಡೂ ದೇಶಗಳ ನಡುವೆ ಸಂಬಂಧ ವೃದ್ಧಿಗೊಂಡಿತ್ತು. 2017ರಲ್ಲಿ ಗಣರಾಜ್ಯೋತ್ಸವ ಪರೇಡ್ ಮುಖ್ಯ ಅತಿಥಿಯಾಗಿ ಯುಎಇ ಯುವರಾಜ ಭೇಟಿ ನೀಡಿದ್ದರು. ಮೋದಿ ಎರಡು ಸಲ ಭೇಟಿ ನೀಡಿರುವ ದೇಶಗಳಲ್ಲಿ ಯುಎಇ ದೇಶ ಸಹ ಒಂದಾಗಿದೆ.

ಝಾಯೆದ್ ಮೆಡಲ್ ಯಾರಿಗೆ ನೀಡುತ್ತಾರೆ?:
ಸಂಯುಕ್ತ ಅರಬ್ ಸಂಸ್ಥಾನವು ಪ್ರತಿ ವರ್ಷವೂ ಝಾಯೆದ್ ಮೆಡಲ್ ಅನ್ನು ರಾಜರು, ಅಧ್ಯಕ್ಷರು ಹಾಗೂ ರಾಜ್ಯದ ಮುಖ್ಯಸ್ಥರಿಗೆ ನೀಡಿ ಗೌರವಿಸಲಾಗುತ್ತದೆ. ಈ ಪ್ರಶಸ್ತಿಯನ್ನು 1995ರಲ್ಲಿ ಮೊದಲ ಬಾರಿ ಜಪಾನ್ ಯುವರಾಜ ನರುಹಿಟೊ ಅವರಿಗೆ ನೀಡಲಾಗಿತ್ತು. 2007ರಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್, 2018ರಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರಿಗೆ ಈ ಗೌರವ ಸಿಕ್ಕಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top