Warning: Use of undefined constant _COOKIE - assumed '_COOKIE' (this will throw an Error in a future version of PHP) in /home/bhavyar4/public_html/hallikatte.com/wp-content/themes/flex-mag/admin/admin-interface.php on line 596

Warning: Cannot modify header information - headers already sent by (output started at /home/bhavyar4/public_html/hallikatte.com/wp-content/themes/flex-mag/admin/admin-interface.php:596) in /home/bhavyar4/public_html/hallikatte.com/wp-content/plugins/sg-cachepress/core/Supercacher/Supercacher_Helper.php on line 77
ಬಿಜೆಪಿ ಸಂಸದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಗರಂ! – Halli Katte
ಸಮಾಚಾರ

ಬಿಜೆಪಿ ಸಂಸದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಗರಂ!

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಪಕ್ಷೀಯ ಸಂಸದರ ವಿರುದ್ಧವೇ ಅಸಮಾಧಾನಗೊಂಡಿದ್ದಾರೆ. ಸಂಸತ್ ಅಧಿವೇಶನದಲ್ಲಿ ಗೈರು ಹಾಜರಿ ಹಾಕುತ್ತಿರುವ ಬಿಜೆಪಿ ಸಂಸದರ ವಿರುದ್ಧ ಪ್ರಧಾನಿ ಮೋದಿ ಅಸಮಾಧಾನಗೊಂಡಿದ್ದಾರೆ.

“ಸಂಸತ್ತಿನಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದರೂ ಹಲವು ಬಾರಿ ಸಂಸದರು ಗೈರು ಹಾಜರಿ ಹಾಕುತ್ತಿರುವುದಕ್ಕೆ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೇ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಮಂಗಳವಾರ ಬಿಜೆಪಿ ಸಂಸದೀಯ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಧಾನಿ ಅಸಮಾಧಾನಗೊಂಡ ವಿಚಾರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸದರಿಗೆ ತಿಳಿಸಿ, ಗೈರು ಹಾಜರಿ ಹಾಕಬಾರದು ಎಂದು ಈ ಹಿಂದೆಯೇ ಸೂಚಿಸಿದ್ದರು ಸಂಸದರು ಪದೇ ಪದೇ ಗೈರು ಹಾಜರಿ ಹಾಕಿ ಈ ಸೂಚನೆಯನ್ನು ಉಲ್ಲಂಘಿಸುತ್ತಿದ್ದೀರಿ ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top