Warning: Use of undefined constant _COOKIE - assumed '_COOKIE' (this will throw an Error in a future version of PHP) in /home/bhavyar4/public_html/hallikatte.com/wp-content/themes/flex-mag/admin/admin-interface.php on line 596

Warning: Cannot modify header information - headers already sent by (output started at /home/bhavyar4/public_html/hallikatte.com/wp-content/themes/flex-mag/admin/admin-interface.php:596) in /home/bhavyar4/public_html/hallikatte.com/wp-content/plugins/sg-cachepress/core/Supercacher/Supercacher_Helper.php on line 77
ದಾಖಲೆ ಬರೆದ ಈರುಳ್ಳಿ ಬೆಲೆ: 1ಕೆಜಿಗೆ 180ರೂ. – Halli Katte
ಸಮಾಚಾರ

ದಾಖಲೆ ಬರೆದ ಈರುಳ್ಳಿ ಬೆಲೆ: 1ಕೆಜಿಗೆ 180ರೂ.

ದೇಶದ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಗಗನ ಮುಟ್ಟಿದ್ದು, ಗುರುವಾರ ಈರುಳ್ಳಿ ಬೆಲೆಯಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಹೆಚ್ಚಳವಾಗಿದೆ. ಕತ್ತರಿಸುವಾಗ ಮಾತ್ರವಲ್ಲದೇ ಖರೀದಿಸುವಾಗ ಗ್ರಾಹಕರು ಕಣ್ಣೀರು ಹಾಕುವಂತಾಗಿದೆ.

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಈರುಳ್ಳಿ ಕೈಗೆ ಸಿಗದ ನಕ್ಷತ್ರವಾಗಿದೆ. ಬೆಂಗಳೂರಿನ ನಗರದ ಮಾರುಕಟ್ಟೆಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಒಂದು ಕೆಜಿಗೆ 180 ರೂಪಾಯಿ ಆಗಿದೆ. ಮಧ್ಯಮ ಮತ್ತು ಸಣ್ಣ ಗಾತ್ರದ ಈರುಳ್ಳಿ ಬೆಲೆ 90 ರಿಂದ 110 ರೂಪಾಯಿ ಇದೆ. ನಗರದಲ್ಲಿ ಮುಂದಿನ ವಾರ ಈರುಳ್ಳಿ ಬೆಲೆ 200 ರೂ. ಗಡಿ ದಾಟಿದರೂ ಅಚ್ಚರಿ ಪಡಬೇಕಿಲ್ಲ.

ಅನಾವೃಷ್ಟಿಯಿಂದಾಗಿ ಈ ಬಾರಿ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಈರುಳ್ಳಿ ಬೆಳೆಗೆ ಹಾನಿಯಾಗಿದೆ. ಪರಿಣಾಮ ಉತ್ಪಾದನೆ ಕುಂಠಿತಗೊಂಡು ದೇಶಾದ್ಯಂತ ಬೆಲೆ ಗಗನಕ್ಕೇರಿ ಕುಳಿತಿದೆ. ಈ ಸಮಸ್ಯೆಯಿಂದ ಪಾರಾಗಲು ಈಗಾಗಲೇ ಕೇಂದ್ರ ಸರ್ಕಾರ ವಿದೇಶಗಳಿಂದ 6000 ಟನ್‌ ಈರುಳ್ಳಿ ಆಮದಿಗೆ ಅನುಮತಿ ನೀಡಿದೆ.

ಈರುಳ್ಳಿ ದರ ಏರಿಕೆಯಿಂದಾಗಿ ಜನರು ಆತಂಕಗೊಂಡಿದ್ದರು. ಈಗ ಹೋಟೆಲ್ ಉದ್ಯಮದ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದ್ದು, ವಿವಿಧ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ನಿರೀಕ್ಷೆ ಇದೆ. ಸಣ್ಣ-ಪುಟ್ಟ ಹೋಟೆಲ್‌ಗಳು ಈಗಾಗಲೇ ನಷ್ಟ ಅನುಭವಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top